'ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ'ದ ಅಧ್ಯಕ್ಷ ಸ್ಥಾನ ನಿರಾಕರಿಸಿದ ನರೇಂದ್ರ ರೈ ದೇರ್ಲ

'ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ'ದ ಅಧ್ಯಕ್ಷ ಸ್ಥಾನ ನಿರಾಕರಿಸಿದ ನರೇಂದ್ರ ರೈ ದೇರ್ಲ

Updated : 25.08.2022

ಬೆಂಗಳೂರು:  ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಸರ್ಕಾರ ಬುಧವಾರ ನೇಮಿಸಿದ್ದು, 'ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ'ದ ಅಧ್ಯಕ್ಷ ಸ್ಥಾನವನ್ನು ಲೇಖಕ, ಅಂಕಣಕಾರ ನರೇಂದ್ರ ರೈ ದೇರ್ಲ ಅವರು ನಿರಾಕರಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ನರೇಂದ್ರ ರೈ ದೇರ್ಲ, 'ತೇಜಸ್ವಿ ಪ್ರತಿಷ್ಠಾನಕ್ಕೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಿರುವ ಈ ಸರಕಾರಕ್ಕೆ ನನ್ನ ಧನ್ಯವಾದಗಳು .ಆದರೆ ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ' ಎಂದು ತಿಳಿಸಿದ್ದಾರೆ. 

© Copyright 2022, All Rights Reserved Kannada One News