ಅಸ್ಪೃಶ್ಯತೆ ಆಚರಣೆ ನಿಲ್ಲುವವರೆಗೂ ದಲಿತರಿಗೆ ಮೀಸಲಾತಿ ಬೇಕು: ಆರ್.ಧ್ರುವನಾರಾಯಣ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಅಸ್ಪೃಶ್ಯತೆ ಆಚರಣೆ ನಿಲ್ಲುವವರೆಗೂ ದಲಿತರಿಗೆ ಮೀಸಲಾತಿ ಬೇಕು: ಆರ್.ಧ್ರುವನಾರಾಯಣ

Updated : 21.09.2022

ಮೈಸೂರು: ದಲಿತರು ಎಷ್ಟೇ ಆರ್ಥಿಕವಾಗಿ ಮುಂದುವರೆದರೂ ಅಸ್ಪೃಶ್ಯತೆ ಆಚರಣೆ  ನಿಂತಿಲ್ಲ, ಹಾಗಾಗಿ  ಆರ್ಥಿಕವಾಗ ಸಬಲರಾಗಲಿ ಬಿಡಲಿ ಅಸ್ಪೃಶ್ಯತೆ ಹೋಗುವವರೆಗೂ  ಮೀಸಲಾತಿ ಮುಂದುವರೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಪ್ರತಿಪಾದಿಸಿದ್ದಾರೆ.

ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ  ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರ್ಥಿಕವಾಗಿ ಸಬಲರಾದ ದಲಿತರಿಗೆ ಮೀಸಲಾತಿ ನಿಲ್ಲಿಸಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಈಶ್ವರಪ್ಪ ಓರ್ವ ದಡ್ಡ ಅವರ ಮಾತಿನಲ್ಲಿ ಅವರಿಗೆ ಹಿಡಿತವಿಲ್ಲ, ಈಗ ಹೇಳಿದ ಮಾತನ್ನು ಮತ್ತೆ ಬದಲಾಯಿಸಿ ದಡ್ಡರತರ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

ದಲಿತರು ಎಷ್ಟೆ ಆರ್ಥಿಕವಾಗಿ ಸಬಲರಾದರೂ ಮೀಸಲು ಕ್ಷೇತ್ರಬಿಟ್ಟು ಚುನಾವಣೆಯಲ್ಲಿ ಸ್ಪರ್ಧೆಮಾಡಲು ಸಾಧ್ಯವಿಲ್ಲ, ಒಂದು ವೇಳೆ ಸಾಮಾನ್ಯ ಕ್ಷೇತ್ರದಿಂದ  ಸ್ಪರ್ಧೆ ಮಾಡಿದರೂ ಗೆಲ್ಲುವುದು ಅಸಾಧ್ಯ, ತಮ್ಮ ಉದಾರತನದಿಂದ ಮೀಸಲು ಕ್ಷೇತ್ರವನ್ನು ಬಿಟ್ಟುಕೊಟ್ಟರೆ ಮಾತ್ರ ಬೇರೆಯವರಿಗೆ ಅವಕಾಶವಾಗುತ್ತದೆ. ಹಾಗಾಗಿ  ಎಲ್ಲಿಯವರೆಗೆ ಅಸ್ಪೃಶ್ಯತೆ ಆಚರೆಯಲ್ಲಿರುತ್ತದೊ ಅಲ್ಲಿಯವರೆಗೆ ಮೀಸಲಾತಿ ಬೇಕೆ ಬೇಕು ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆ ಕಂಡು ಬಿಜೆಪಿಯವರಿಗೆ ಭ್ರಮೆ ಶುರುವಾಗಿದೆ ಹೊರತು ಕಾಂಗ್ರೆಸ್ ನವರಿಗಲ್ಲ, ಹಾಗಾಗಿಯೆ ಬಿಜೆಪಿಯವರಿಗೆ ನಡುಕ ಉಂಟಾಗಿದೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ದೇಶದ ಐಕ್ಯತೆಗಾಗಿ ಹೋರಾಟ ಮಾಡುತ್ತಿದೆ. ಭಾರತ್ ಜೋಡೋ ಪಕ್ಷಾತೀತ ಪಾದಯಾತ್ರೆ. ಈ ಪಾದಯಾತ್ರೆಯಿಂದ ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಹೊರಟಿಲ್ಲ, ನಮ್ಮ ಪಾದಯಾಯತ್ರೆಗೆ ಎಲ್ಲರೂ ಬೆಂಬಲ ನೀಡುತ್ತಿದ್ದಾರೆ. ಈಗಾಗಲೇ ರೈತ ನಾಯಕ ಯೋಗೇಂದ್ರ ಯಾದವ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ನಮ್ಮ ನಾಯಕರಾದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ 3570 ಕಿ.ಮೀ. ಪಾದಯಾತ್ರೆ ನಡೆಯುತ್ತಿದೆ. ಇದು ದೇಶದ ಇತಿಹಾಸದಲ್ಲೇ ಅತೀ ದೊಡ್ಡ ಪಾದಯಾತ್ರೆ. ಇಲ್ಲಿ ಸೇರುತ್ತಿರುವ ಜನರನ್ನು ಕಂಡು ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಹೇಳಿದರು.

ದೇಶದ ನಿಜವಾದ ನಕಲಿ ದೇಶ ಭಕ್ತರು ಬಿಜೆಪಿಯವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಕಿಡಿಕಾರಿದರು.

ದೇಶಭಕ್ತಿ ಹೆಸರಿನಲ್ಲಿ ಸುಳ್ಳುಗಳನ್ನೇ ಹೇಳಿಕೊಂಡು ಜನರಿಗೆ ಮಂಕು ಬೂದಿ ಎರಚಲು ಹೊರಟಿದ್ದಾರೆ. ಅಧಿಕಾರಕ್ಕೆ ಬಂದು 8 ವರ್ಷಗಳಾಯಿತು ತಮ್ಮ ಸಾಧನೆ ಏನು ಎಂಬುದನ್ನು ದೇಶದ ಜನರಿಗೆ ತಿಳಿಸಬೇಕಿದೆ. ಪ್ರತಿಸಾಮಾನ್ಯ ವ್ಯಕ್ತಿತ ಖಾತೆ 15 ಲಕ್ಷ ಹಾಕುತ್ತೇವೆ ಎಂದರು,  ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುತ್ತೇನೆ ಎಂದವರು ನೀಡಿದರ? ಯಾರು ನಕಲಿಗಳು ಎಂದು ಜನ ನೋಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ದೇಶದಲ್ಲಿ ಜನ ಆತಂಕದಲ್ಲೇ ಬದುಕುವಂತಾಗಿದೆ. ಕಾಶ್ಮೀರದಲ್ಲಿ ಪಂಡಿತರನ್ನು ಉಗ್ರರು ಗುಂಡಿಕ್ಕಿ ಕೊಲ್ಲುತ್ತಿದ್ದಾರೆ. ಚೈನಾದವರು ಭಾರತದ ಒಳಗೆ ನುಸುಳಿ ಹಲವು ಪ್ರದೇಶಗಳನ್ನು ಆಕ್ರಮಿಸಿಕೊಂಡಿದ್ದಾರೆ. ಇಂತಹದರಲ್ಲಿ ಬಿಜೆಪಿಯವರು ದೇಶದ ಸುರಕ್ಷತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಗುಡುಗಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಲ್ಲಿದ್ದಲು ಖಾತೆಯನ್ನು ಹೊಂದಿದ್ದಾರೆ. ಕರ್ನಾಟಕಕ್ಕೆ ನಿಮ್ಮ ಸಾಧನೆ ಏನು ಎಂದು ತಿಳಿಸುವ ಬದಲು ಬರೀ ಕಾಂಗ್ರೆಸ್ ಪಕ್ಷವನ್ನೇ ಟೀಕೆ ಮಾಡುವುದಾಗಿದೆ. ಅವರಿಗೆ ಕಾಂಗ್ರೆಸ್ ಭಯ ಕಾಡುತ್ತಿದೆ ಎಂದು ಹೇಳಿದರು.

© Copyright 2022, All Rights Reserved Kannada One News