'ಒಬ್ಬ ವ್ಯಕ್ತಿಗೆ ಒಂದು ಹುದ್ದೆ' ನಿಯಮ ಬೆಂಬಲಿಸಿದ ರಾಹುಲ್ ಗಾಂಧಿ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

'ಒಬ್ಬ ವ್ಯಕ್ತಿಗೆ ಒಂದು ಹುದ್ದೆ' ನಿಯಮ ಬೆಂಬಲಿಸಿದ ರಾಹುಲ್ ಗಾಂಧಿ

Updated : 22.09.2022

ಕೊಚ್ಚಿ: ರಾಜಸ್ಥಾನದ ಉದಯಪುರದ ಚಿಂತನ್ ಶಿಬಿರದಲ್ಲಿ ತೆಗೆದುಕೊಂಡ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ಎಲ್ಲರೂ ಅನುಸರಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕಾಂಗ್ರೆಸ್ ಅಧ್ಯಕ್ಷರ ಗಾದಿ ನಿಭಾಯಿಸುವ ವಿಶ್ವಾಸದಲ್ಲಿದ್ದರು.

ಭಾರತ್ ಜೋಡೋ ಯಾತ್ರೆಯ ಮೊದಲ ಮತ್ತು ಎರಡನೇ ಹಂತದ ನಡುವೆ ಇಂದು ಪತ್ರಿಕಾಗೋಷ್ಠಿಯಲ್ಲಿ ವರದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೇವಲ ಸಾಂಸ್ಥಿಕ ಸ್ಥಾನವಲ್ಲ, ಅದು ಸೈದ್ಧಾಂತಿಕ ಹುದ್ದೆ ಮತ್ತು ನಂಬಿಕೆಯ ವ್ಯವಸ್ಥೆಯಾಗಿದೆ ಎಂದಿದ್ದಾರೆ.

"ನಾವು ಉದಯಪುರದಲ್ಲಿ ಏನು ನಿರ್ಧರಿಸಿದ್ದೇವೆ, ಆ ಬದ್ಧತೆಯನ್ನು ಉಳಿಸಿಕೊಳ್ಳಬೇಕೆಂದು ನಾವು ನಿರೀಕ್ಷಿಸುತ್ತೇವೆ. ಉದಯಪುರ ಚಿಂತನ ಶಿಬಿರದಲ್ಲಿ ಒಬ್ಬ ವ್ಯಕ್ತಿಗೆ, ಒಂದು ಹುದ್ದೆ ನಿಯಮ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ" ಎಂದರು.

ವಯನಾಡ್‌ನ ಸಂಸದರೂ ಆಗಿರುವ ರಾಹುಲ್ ಗಾಂಧಿ, ಯಾರೇ ಪಕ್ಷದ ಅಧ್ಯಕ್ಷರಾಗಿದ್ದರೂ ಅವರು ಆ ಹುದ್ದೆಯು ಕಲ್ಪನೆಗಳು, ನಂಬಿಕೆ ವ್ಯವಸ್ಥೆ ಮತ್ತು ಭಾರತದ ದೃಷ್ಟಿಕೋನವನ್ನು ಪ್ರತಿನಿಧಿಸುತ್ತಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಗಳಿಗೆ ಅವರು ನೀಡಿದ ಮತ್ತೊಂದು ಸಲಹೆಯೆಂದರೆ, "ನೀವು ಐತಿಹಾಸಿಕ ಸ್ಥಾನವನ್ನು ತೆಗೆದುಕೊಳ್ಳುತ್ತಿದ್ದೀರಿ. ಭಾರತದ ನಿರ್ದಿಷ್ಟ ದೃಷ್ಟಿಕೋನವನ್ನು ವ್ಯಾಖ್ಯಾನಿಸುವ ಸ್ಥಾನ ಅದು" ಎಂದಿದ್ದಾರೆ.

ಏತನ್ಮಧ್ಯೆ, ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರೆಲ್ಲ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹದ ನಡುವೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೇರಳಕ್ಕೆ ಆಗಮಿಸಿದ್ದಾರೆ.

© Copyright 2022, All Rights Reserved Kannada One News