Flash News:
ಮುಂಬೈ: ರಸ್ತೆ ಅಪಘಾತ, ಐವರು ಮೃತ್ಯು

ಮುಂಬೈ: ರಸ್ತೆ ಅಪಘಾತ, ಐವರು ಮೃತ್ಯು

Updated : 05.10.2022

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ  ವೇಗವಾಗಿ ಬಂದ ಕಾರೊಂದು ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಇದಕ್ಕೂ ಮೊದಲು ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ  ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಹಾಗೂ  ಇತರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸಿದ್ಧತೆ ನಡೆಸುತ್ತಿದ್ದಾಗ ಬುಧವಾರ ಮುಂಜಾನೆ 3:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಬಾಂದ್ರಾದಲ್ಲಿ ವರ್ಲಿ ಲೇನ್‌ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗಲೇ  ಅತಿವೇಗವಾಗಿ ಬಂದ  ಕಾರೊಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ.

ಅಪಘಾತದ ನಂತರ ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅಧಿಕಾರಿಗಳು ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಿದರು.

ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

© Copyright 2022, All Rights Reserved Kannada One News