ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರಾಬಿನ್‌ ಉತ್ತಪ್ಪ

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರಾಬಿನ್‌ ಉತ್ತಪ್ಪ

Updated : 15.09.2022

ಕರ್ನಾಟಕದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. “ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸಿದ ಹೆಮ್ಮೆ ನನಗಿದೆ. ಎಲ್ಲ ಮಾದರಿಯ ಕ್ರಿಕೆಟ್‌ ಆಟಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಕೃತಜ್ಞತೆಗಳು" ಎಂದು ರಾಬಿನ್‌ ಟ್ಟೀಟ್‌ ಮಾಡಿದ್ದಾರೆ.

36 ವರ್ಷ ವಯಸ್ಸಿನ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಭಾರತ ಪರ 13 ಟಿ20 ಪಂದ್ಯಗಳನ್ನಾಡಿದ್ದಾರೆ. ಅವರು 2007ರಲ್ಲಿ ಭಾರತದ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು.

"ನಾನು ವೃತ್ತಿಪರ ಕ್ರಿಕೆಟ್ ಆಡಲು ಪ್ರಾರಂಭಿಸಿ 20 ವರ್ಷಗಳು ಕಳೆದಿವೆ ಮತ್ತು ನನ್ನ ದೇಶ ಮತ್ತು ರಾಜ್ಯ, ಕರ್ನಾಟಕವನ್ನು ಪ್ರತಿನಿಧಿಸುವುದು ಅತ್ಯಂತ ದೊಡ್ಡ ಗೌರವವಾಗಿದೆ. ಇದೊಂದು ಅದ್ಭುತ ಪಯಾಣವಾಗಿದೆ. ನನಗೆ ಬೆಳೆಯಲು ಅವಕಾಶ ಸಿಕ್ಕಿದೆ. ಮಾನವನಾಗಿ, ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಕೃತಜ್ಞತೆಯ ಹೃದಯದಿಂದ ನಾನು ಭಾರತೀಯ ಕ್ರಿಕೆಟ್‌ನ ಎಲ್ಲ ಪ್ರಕಾರಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಮುಂದಿನ ದಿನಗಳಲ್ಲಿ ನಾನು ನನ್ನ ಕುಟುಂಬದೊಂದಿಗೆ ಮಹತ್ವದ ಸಮಯ ಕಳೆಯುತ್ತೇನೆ" ಎಂದು ಉತ್ತಪ್ಪ ತಮ್ಮ ವಿದಾಯ ಟಿಪ್ಪಣಿಯಲ್ಲಿ ಬರೆದಿದ್ದಾರೆ. 

ಎಂಎಸ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ ಅವರು ಇಲ್ಲಿಯವರೆಗೆ ಆಡಿದ ಎಲ್ಲಾ ಐಪಿಎಲ್ ತಂಡಗಳಿಗೆ ಅವರು ಧನ್ಯವಾದ ಅರ್ಪಿಸಿದರು.

© Copyright 2022, All Rights Reserved Kannada One News