ಬಿಸಿಸಿಐ ಅಧ್ಯಕ್ಷರಾಗಿ ವಿಶ್ವಕಪ್ ವಿಜಯದ ರೂವಾರಿ ಕನ್ನಡಿಗ ರೋಜರ್ ಬಿನ್ನಿ ನೇಮಕ

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಬಿಸಿಸಿಐ ಅಧ್ಯಕ್ಷರಾಗಿ ವಿಶ್ವಕಪ್ ವಿಜಯದ ರೂವಾರಿ ಕನ್ನಡಿಗ ರೋಜರ್ ಬಿನ್ನಿ ನೇಮಕ

Updated : 18.10.2022

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ  1983 ರ ವಿಶ್ವಕಪ್ ವಿಜೇತ ತಂಡದ ಹೀರೊ  ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) 36 ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಯಿತು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗುಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ 67 ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿತ್ತು.

ಬಿನ್ನಿ ಅವರು ಸದ್ಯ  ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.  ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ. ಮಧ್ಯಮ ವೇಗಿ 1983 ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದರು. ವಿಶ್ವಕಪ್ ನ ಎಂಟು ಪಂದ್ಯಗಳಲ್ಲಿ ಅವರು 18 ವಿಕೆಟ್‌ಗಳನ್ನು ಪಡೆದಿದ್ದರು. ಇದು ಪ್ರತಿಷ್ಠಿತ ಪಂದ್ಯಾವಳಿಯ 1983ರ ಆವೃತ್ತಿಯಲ್ಲಿ ಬೌಲರ್ ನ ಅತ್ಯುತ್ತಮ ಸಾಧನೆಯಾಗಿತ್ತು.

© Copyright 2022, All Rights Reserved Kannada One News