ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ: ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಬಣ್ಣನೆ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ: ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಬಣ್ಣನೆ

Updated : 22.09.2022

ನವದೆಹಲಿ: ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ ಎಂದು ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಬಣ್ಣಿಸಿದ್ದಾರೆ.

ಮೋಹನ್ ಭಾಗವತ್ ಜೊತೆಗಿನ ಭೇಟಿ ಕುರಿತಂತೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ತಮ್ಮ ಆಹ್ವಾನದ ಮೇರೆಗೆ ಮೋಹನ್ ಭಾಗವತ್ ಮದರಾಸವೊಂದಕ್ಕೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಅವರು ರಾಷ್ಟ್ರಪಿತ, ರಾಷ್ಟ್ರ ಮೊದಲು ಎಂಬುದರಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿದ್ದೇವೆ. ನಮ್ಮ ಡಿ ಎನ್ ಎ ಕೂಡಾ ಒಂದೇ ಆಗಿದೆ. ಆದರೆ, ನಾವು ಪೂಜೆ ಮಾಡುವ ವಿಧಾನ ಮಾತ್ರ ಬೇರೆ ಬೇರೆ ಎಂದಿದ್ದಾರೆ.

ಮೋಹನ್ ಭಾಗವತ್ ಅವರಿಂದು ಸಂಘದ ಹಿರಿಯ ಪದಾಧಿಕಾರಿಗಳೊಂದಿಗೆ ಮಸೀದಿಯೊಂದಕ್ಕೆ ತೆರಳಿ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಅವರನ್ನು ಭೇಟಿಯಾಗಿದ್ದರು. ಕಸ್ತೂರ ಬಾ ಗಾಂಧಿ ಮಾರ್ಗದಲ್ಲಿನ ಮಸೀದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಹಲವು ವಿಚಾರಗಳು ಕುರಿತಂತೆ ಚರ್ಚೆ ನಡೆಸಿದರು.

ಸಭೆಯ ವಿವರಗಳನ್ನು ಹಂಚಿಕೊಂಡಿರುವ ಇಲ್ಯಾಸಿ ಸಹೋದರ ಸುಹೈಲ್ ಇಲ್ಯಾಸಿ, ನಮ್ಮ ತಂದೆಯ ಪುಣ್ಯ ಸ್ಮರಣೆ ಸಂದರ್ಭದಲ್ಲಿ ತಮ್ಮ ಆಹ್ವಾನದ ಮೇರೆಗೆ ಭಾಗವತ್ ಬಂದದ್ದು, ಪ್ರಮುಖ ವಿಚಾರವಾಗಿದೆ. ಅಲ್ಲದೇ ಇದು ದೇಶಕ್ಕೆ ಒಳ್ಳೆಯ ಸಂದೇಶ ಕಳುಹಿಸಲಿದೆ ಎಂದು ತಿಳಿಸಿದರು.

© Copyright 2022, All Rights Reserved Kannada One News