19 ಪೈಸೆ ಕುಸಿದ ರೂಪಾಯಿ ಮೌಲ್ಯ

19 ಪೈಸೆ ಕುಸಿದ ರೂಪಾಯಿ ಮೌಲ್ಯ

Updated : 12.07.2022

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಸೋಮವಾರ 19 ಪೈಸೆಯಷ್ಟು ಕುಸಿಯಿತು. ಹೀಗಾಗಿ, ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 79.45ಕ್ಕೆ ತಲುಪಿದೆ.

ಡಾಲರ್‌ ಮೌಲ್ಯವರ್ಧನೆ ಹಾಗೂ ವಿದೇಶಿ ಬಂಡವಾಳ ಹೊರಹರಿವಿನ ಕಾರಣದಿಂದಾಗಿ ರೂಪಾಯಿ ಮೌಲ್ಯ ಕುಸಿದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಜೂನ್‌ ತಿಂಗಳಲ್ಲಿ ವ್ಯಾಪಾರ ಕೊರತೆಯು ದಾಖಲೆಯ ಮಟ್ಟವನ್ನು ತಲುಪಿದೆ. ಇದು ರೂಪಾಯಿ ಮೌಲ್ಯದ ಮೇಲೆ ಕೆಟ್ಟ ಪರಿಣಾಮ ಉಂಟುಮಾಡುತ್ತಿದೆ ಎಂದು ರೆಲಿಗೇರ್ ಬ್ರೋಕಿಂಗ್‌ ಕಂಪನಿಯ ಸರಕು ಮತ್ತು ಕರೆನ್ಸಿ ಸಂಶೋಧನಾ ವಿಭಾಗದ ಉಪಾಧ್ಯಕ್ಷೆ ಸುಗಂಧಾ ಸಚದೇವ ಹೇಳಿದ್ದಾರೆ.

ಸೋಮವಾರದ ವಹಿವಾಟಿನಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು ಒಟ್ಟು ₹ 170 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ವಿದೇಶಿ ಹೂಡಿಕೆದಾರರು ಈ ತಿಂಗಳಲ್ಲಿ ಒಟ್ಟು ₹ 4 ಸಾವಿರ ಕೋಟಿಗಿಂತ ಹೆಚ್ಚಿನ ಮೊತ್ತದ ಬಂಡವಾಳವನ್ನು ಹಿಂದಕ್ಕೆ ಪಡೆದಿದ್ದಾರೆ.

© Copyright 2022, All Rights Reserved Kannada One News