Flash News:
ಯುದ್ದನೀತಿ ವಿರೋಧಿಸಿ ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ತಡೆ ನೀಡಿದ ಫೇಸ್‌ಬುಕ್

ಯುದ್ದನೀತಿ ವಿರೋಧಿಸಿ ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ತಡೆ ನೀಡಿದ ಫೇಸ್‌ಬುಕ್

Updated : 26.02.2022

ಸ್ಯಾನ್ಫ್ರಾನ್ಸಿಸ್ಕೊ: ರಷ್ಯಾದ ಮಿಲಿಟರಿ ದಾಳಿಯನ್ನು ವಿರೋಧಿಸಿರುವ ಪೇಸಬುಕ್‌, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಣ ಸಂಪಾದಿಸುವ ರಷ್ಯಾದ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.

 ಈಗ ರಷ್ಯಾದ ಮಾಧ್ಯಮಗಳು ವಿಶ್ವದ ಯಾವುದೇ ಭಾಗದಲ್ಲಿ ನಮ್ಮ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ಪ್ರಕಟಿಸುವುದು ಅಥವಾ ಹಣ ಗಳಿಸುವುದನ್ನು ನಿಷೇಧಿಸುತ್ತಿದ್ದೇವೆ' ಎಂದು ಫೇಸ್ಬುಕ್ ಭದ್ರತಾ ನೀತಿ ವಿಭಾಗ ಮುಖ್ಯಸ್ಥ ನಥಾನಿಯಲ್ ಗ್ಲೀಚರ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ. ರಷ್ಯಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳಿಗೆ ಲೇಬಲ್ಹಾಕುವುದನ್ನು ಮುಂದುವರಿಸುತ್ತದೆ' ಎಂದು ಅವರು ಹೇಳಿದ್ದಾರೆ.

ಶುಕ್ರವಾರ), ರಷ್ಯಾದ ನಾಲ್ಕು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆಗಳು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ವಿಚಾರದ ಸ್ವತಂತ್ರ ಫ್ಯಾಕ್ಟ್ ಚೆಕ್ ಮತ್ತು ಲೇಬಲ್ ಹಾಕುವುದನ್ನು ನಿಲ್ಲಿಸುವಂತೆ ರಷ್ಯಾದ ಅಧಿಕಾರಿಗಳು ನಮಗೆ ಆದೇಶಿಸಿದರು. 'ನಾವು ನಿರಾಕರಿಸಿದ್ದೇವೆ'' ಎಂದು ಫೇಸ್ಬುಕ್ ಮಾತೃ ಸಂಸ್ಥೆ ಮೆಟಾದ ನಿಕ್ ಕ್ಲೆಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಷ್ಯಾದ ನಾಗರಿಕರ ಹಕ್ಕುಗಳನ್ನು ಉಲ್ಲಂಘಿಸುತ್ತಿದೆಫೇಸ್ಬುಕ್ಬಳಕೆಯನ್ನು ಸೀಮಿತಗೊಳಿಸಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮ ನಿಯಂತ್ರಿತ ಹೇಳಿದ ಗಂಟೆಗಳ ನಂತರ ಅವರ ಹೇಳಿಕೆ ಬಂದಿದೆ.

ಉಕ್ರೇನ್ನಲ್ಲಿ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಪ್ರತಿಕ್ರಿಯೆಯಾಗಿ ಪರಿಸ್ಥಿತಿಯನ್ನು ಅವಲೋಕಿಸಲು ಫೇಸ್ಬುಕ್ ವಿಶೇಷ ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಿದೆ ಎಂದು ಗ್ಲೀಚರ್ ಹೇಳಿದ್ದಾರೆ.

© Copyright 2022, All Rights Reserved Kannada One News