Flash News:
ಉಸಿರಾಟದ ಸಮಸ್ಯೆ: ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಉಸಿರಾಟದ ಸಮಸ್ಯೆ: ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Updated : 25.09.2022

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರು ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮೈಸೂರು  ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

© Copyright 2022, All Rights Reserved Kannada One News