‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

Related Articles

ಮಲ್ಲಿಕಾರ್ಜುನ ಖರ್ಗೆಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

‘ಪೇ ಟಿಎಂ ಅಲ್ಲ ಪೇ ಸಿಎಂ’: ಇದು ಬಿಜೆಪಿ ಭ್ರಷ್ಟಾಚಾರದ ಜಾಹೀರಾತು

ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

ಮೂಡಿಗೆರೆ ಮಾಯಾವಿ ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿ ಕುರಿತು ಪಿ. ಲಂಕೇಶರ ಮಾತು

ಗೌರಿಯನ್ನು ಕೊಂದವರು ಜೈಲಿನಲ್ಲಿದ್ದಾರೆ, ಕೊಲ್ಲಿಸಿದವರು ಅಧಿಕಾರದಲ್ಲಿದ್ದಾರೆ: ನಟ ಪ್ರಕಾಶ್ ರಾಜ್

ನಾ ಕಂಡ ಹಾಗೆ 'ಗೌರಿ' ಅಮ್ಮ: ವಿಕಾಸ್ ಆರ್ ಮೌರ್ಯ ಅವರ ಲೇಖನ

ಗೌರಿಯ ಅಕ್ಷರಗಳು ಮಾತು ಚಟುವಟಿಕೆ ಎಲ್ಲವೂ ನಿರ್ಭಯ ಭಾರತ ನಿರ್ಮಾಣದ ಗುರಿ ಹೊಂದಿತ್ತು: ಕೆ. ನೀಲಾ ಅವರ ಲೇಖನ

ನನ್ನಕ್ಕ ಗೌರಿ ಲಂಕೇಶ್, ನಾನು ಲಂಕೇಶ್! -ಅಪ್ಪಗೆರೆ ಲಂಕೇಶ್ ಅವರ ಲೇಖನ

ಗೌರಿ ಲಂಕೇಶ್ ವ್ಯಕ್ತಿತ್ವದ ಭಿನ್ನ ಆಯಾಮಗಳು: ಹುಲಿಕುಂಟೆ ಮೂರ್ತಿ ಅವರ ಲೇಖನ

ಜನಸೇವಕ ಟಿ.ಆರ್.ಶಾಮಣ್ಣ ನೆನಪು: ಹರೀಶ್ ಕಳಸೆ ಅವರ ಲೇಖನ

‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

Updated : 08.09.2022

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಹಾವಳಿಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನರು ಪರದಾಡುತ್ತಿದ್ದಾರೆ. ರಸ್ತೆಗಳಲ್ಲಿ ನದಿಗಳಂತೆ ನೀರು ಹರಿಯುತ್ತಿದೆ ಇನ್ನೂ ಮಳೆಯಿಂದ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ರಸ್ತೆಗಳಲ್ಲಿರುವ ಗುಂಡಿಗಳಿಂದ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ರಾಜ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾದಂತಹ ಆಡಳಿತ ಸರ್ಕಾರ ವಿರೋಧ ಪಕ್ಷವಾದ ಕಾಂಗ್ರೆಸ್‌ನವರ ಆರೋಪ ಪತ್ಯಾರೋಪದಲ್ಲಿ ತೊಡಗಿದೆ. ಕಾಂಗ್ರೆಸ್‌ನ ದುರಾಡಳಿತವೇ ಬೆಂಗಳೂರಿನ ದುಸ್ಥಿಗೆ ಕಾರಣ ಎಂದು ಆರೋಪ ಮಾಡ್ತಿದೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್‌ ಆಡಳಿತದಲ್ಲಿರುವ ಬಿಜೆಪಿ ನಾಯಕರ ಏನ್‌ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದೆ. ಇನ್ನೂ ಈ ಬಾರಿಯ ಮಳೆಯಿಂದ ಜನರು ಸಾಕಷ್ಟು ಸಂಕಷ್ಟಕ್ಕೆ ತಲುಪಿದ್ದಾರೆ ಇಂತಹ ಸಂದಿಗ್ಧತೆಯಲ್ಲಿ ಅವರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಾದ ಬೆಂಗಳೂರು ಪ್ರತಿನಿಧಿಸುವ ‘ಸಚಿವರು ಕಾಣೆಯಾಗಿದ್ದಾರೆ’ ಎಂದು ಕಾಂಗ್ರೆಸ್ ಟ್ವಿಟರ್ ನಲ್ಲಿ #MissingMinisters #BJPBrashtotsava #Jalotsava ಎಂದು ಅಭಿಯಾನ ಆರಂಭಿಸಿದೆ. ಬಿಜೆಪಿ ಆಡಳಿತದ ಕೆಲ ಸಚಿವರು, ಸಂಸದರ ಪಟ್ಟಿಯನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದ್ದು, ಸಚಿವರು, ಸಂಸದರು ಕಾಣೆಯಾಗಿದ್ದಾರೆ ಎಂದು ಟ್ವೀಟ್‌ ಮಾಡಿ ಕಾಲೆಳೆದಿದೆ.ಸಚಿವ ಸುಧಾಕರ್‌ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ. ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ! ಎಂದು ಕಾಂಗ್ರೆಸ್ ಟೀಕಿಸಿದೆ. ಇನ್ನೂ ಕೊನೇ ಬಾರಿ ಕಾಣಿಸಿಕೊಂಡಿದ್ದು ಜನೋತ್ಸವದ ತಯಾರಿ ಸಭೆಯಲ್ಲಿ ಇವರ ಮಾಹಿತಿ ಇದ್ದವರು ಅವರಿಗೆ ರಾಜ್ಯದ ಜಲೋತ್ಸವದ ಬಗ್ಗೆ ಮಾಹಿತಿ ನೀಡಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ. ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಇನ್ನೂ ಕೊನೇ ಬಾರಿ ಕಾಣಿಸಿಕೊಂಡಿದ್ದು ತೀರ್ಥಹಳ್ಳಿಯಲ್ಲಿ ಇವರ ಮಾಹಿತಿ ಇದ್ದವರು ಮಾನ್ಯರಿಗೆ ತಾವು ಈ ರಾಜ್ಯದ ಗೃಹ ಸಚಿವ, ಕೇವಲ ತಮ್ಮ ಕ್ಷೇತ್ರಕ್ಕೆ ಮಾತ್ರ ಅಲ್ಲ ಎಂದು ಮನವರಿಕೆ ಮಾಡಿ ಬೆಂಗಳೂರಿಗೆ ಬರಲು ಹೇಳಿ ಎಂದು ಕಾಂಗ್ರೆಸ್‌ ಎಚ್ಚರಿಸಿದೆ.

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಆರ್‌. ಆಶೋಕ್‌ ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ. ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಬ್, ಹಲಾಲ್‌ಗಳಿಗೆ ಕ್ರಿಯಾಶೀಲರಾಗ್ತಾರೆ! ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಇನ್ನೂ ಕೊನೇ ಬಾರಿ ಕಾಣಿಸಿಕೊಂಡಿದ್ದು ಸಭೆಯಲ್ಲಿ ನಿದ್ದೆ ಮಾಡುತ್ತಿದ್ದಾಗ ಇವರ ಮಾಹಿತಿ ಇದ್ದವರು ಸಚಿವರನ್ನು ನಿದ್ದೆಯಿಂದ ಎಚ್ಚರಿಸಿ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.ಸಂಸದ ತೇಜಸ್ವಿ ಸೂರ್ಯ ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ! ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ! ಇನ್ನೂ ಕೊನೇ ಬಾರಿ ಕಾಣಿಸಿಕೊಂಡಿದ್ದು ಬೆಳಿಗ್ಗೆ ದೋಸೆ ತಿನ್ನಲು ಹೋಗಿದ್ದಾರೆ. ಇವರ ಮಾಹಿತಿ ಇದ್ದವರು ಕೂಡಲೇ ಬೆಂಗಳೂರು ದಕ್ಷಿಣ ಮತದಾರರಿಗೆ ಮಾಹಿತಿ ನೀಡಿ ಎಂದು ಕಾಂಗ್ರೆಸ್‌ ಕುಟುಕಿದೆ.


ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ! ಸಚಿವರೇ ಜನರತ್ತ ನೋಡುವುದು ಯಾವಾಗ? ಇನ್ನೂ ಕೊನೇ ಬಾರಿ ಕಾಣಿಸಿಕೊಂಡಿದ್ದು ಅರಸೀಕೆರೆಯಲ್ಲಿ ಸನ್ಮಾನ ಸ್ವೀಕರಿಸುವಾಗ ಇವರ ಮಾಹಿತಿ ಇದ್ದವರು ಅವರಿಗೆ ಬೆಂಗಳೂರಿನ ದಾರಿ ತೋರಿಸಿ ಎಂದು ಕಾಂಗ್ರೆಸ್ ಸೂಚಿಸಿದೆ.


ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ ವಿ.ಸೋಮಣ್ಣ ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ? ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ? ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ? ಇನ್ನೂ ಕೊನೇ ಬಾರಿ ಕಾಣಿಸಿಕೊಂಡಿದ್ದು ಬೆಂಗಳೂರಿನ ಮೇಲೆ ಹಿಡಿತಕ್ಕಾಗಿ ಸಚಿವ ಆರ್‌ ಆಶೋಕ್‌ ಜೊತೆಗಿನ ತಿಕ್ಕಾಟದಲ್ಲಿ ಇವರ ಮಾಹಿತಿ ಇದ್ದವರು ಅವರಿಗೆ ಬೆಂಗಳೂರಿನ ಪ್ರವಾಹ ಸಮಸ್ಯೆ ಸುಧಾರಿಸಲು ಪೈಪೋಟಿ ನಡೆಸಲು ತಿಳಿಸಿ ಎಂದು ಕಾಂಗ್ರೆಸ್ ಟೀಕಿಸಿದೆ.


ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ ಕೆ.ಗೋಪಾಲಯ್ಯ ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ. ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಾಪತ್ತೆಯಾಗಿದ್ದೆಲ್ಲಿ? ಸಿಎಂ ಸಚಿವರೆಲ್ಲರನ್ನೂ ‘ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ’ ಎಂಬಂತೆ ಬಿಟ್ಟಿದ್ದಾರೆಯೇ?! ಕೊನೆ ಬಾರಿ ಕಾಣಿಸಿಕೊಂಡಿದ್ದು ಮಾಹಿತಿ ಇಲ್ಲ ಇವರ ಮಾಹಿತಿ ಇದ್ದವರು ಅವರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಹೇಳಿ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.


ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ ಬೈರತಿ ಬಸವರಾಜ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ. ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ? ಕೊನೆ ಬಾರಿ ಕಾಣಿಸಿಕೊಂಡಿದ್ದು ಯಾರಿಗೂ ಗೊತ್ತಿಲ್ಲಾ... ಇವರ ಮಾಹಿತಿ ಇದ್ದವರು ಅವರಿಗೆ ಅವೈಜ್ಞಾನಿಕ ಅಭಿವೃದ್ಧಿಯಿಂದ ಅನಾಹುತಗಳನ್ನು ತೋರಿಸಿ ಎಂದು ಕಾಂಗ್ರೆಸ್‌ ಎಚ್ಚರಿಸಿದೆ.