‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

‘ಬನಾರಸ್‌’: ರಾಜ್ಯದ 125 ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

Updated : 15.11.2022

ಭಾಸ್ಕರ್ ಆರ್. ನೀನಾಸಂ ನಿರ್ದೇಶನದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಇದೇ ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಟ್ರೇಲರ್‌ ಕೂಡಾ ಬಿಡುಗಡೆಯಾಗಿದ್ದು, ಪ್ರೇಕ್ಷಕ ವಲಯದಲ್ಲಿ ಬಾಳ ಕುತೂಹಲ ಸೃಷ್ಟಿಸಿದೆ.

ನೈಜ ಘಟನೆ ಆಧರಿಸಿ ಹೆಣೆದ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ‘ಸದ್ದು ವಿಚಾರಣೆ ನಡೆಯುತ್ತಿದೆ’. ಚಿತ್ರಕ್ಕೆ ಕಥೆ ಬರೆದು ಭಾಸ್ಕರ್ ಆರ್. ನೀನಾಸಂ ನಿರ್ದೇಶನ ಮಾಡಿದ್ದಾರೆ. ರಾಕೇಶ್ ಮಯ್ಯ, ಪಾವನ ಗೌಡ ನಾಯಕ ನಾಯಕಿಯಾಗಿ ನಟಿಸಿದ್ದು, ಪ್ರಮುಖ ಪಾತ್ರದಲ್ಲಿ ಮಧುನಂದನ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಜಹಾಂಗೀರ್ ಈ ಚಿತ್ರದ ತಾರಾಗಣದಲ್ಲಿದ್ದಾರೆ.

ಎಂ. ಎಂ. ಸಿನಿಮಾಸ್ ಬ್ಯಾನರ್ ಅಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್‌ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ. ಸಂಕಲನ ಚಿತ್ರಕ್ಕಿದೆ.

© Copyright 2022, All Rights Reserved Kannada One News