Flash News:
SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

Updated : 29.09.2022

ಹಾವೇರಿ:  'ಎಸ್ ಡಿಪಿಐ ಭಾರತ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುವ ಪಕ್ಷ. ಇದರ ನಿಷೇಧದ ಬಗ್ಗೆ  ಯಾವುದೇ ನಿರ್ಧಾರ  ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ' ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,  'ಎಸ್ ಡಿಪಿಐ ನಿಷೇಧದ ಬಗ್ಗೆ ಬರುವ ದಿನಗಳ ಬೆಳವಣಿಗೆಯ ಆಧಾರದ ಮೇಲೆ ಕ್ರಮ ವಹಿಸಲಾಗುವುದು' ಎಂದು ತಿಳಿಸಿದರು. 

'ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು  ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಡಿ.ಕೆ.ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ  ಬಿಜೆಪಿಗೆ ಇಲ್ಲ. ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ.  ಹೀಗಾಗಿ ಅದರ ಅವಶ್ಯಕತೆ ಇಲ್ಲ ಎಂದು  ಭಾರತ್ ಜೋಡೋ ಫ್ಲೆಕ್ಸ್ ಗಳನ್ನು ಹರಿದುಹಾಕಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.  

ಸಚಿವರಾದ  ಶಿವರಾಂ ಹೆಬ್ಬಾರ್, ಬಿ.ಸಿ. ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರೂ ಓಲೇಕಾರ್, ಮಾಜಿ ಶಾಸಕ ಮಹಿಮಾ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು.

© Copyright 2022, All Rights Reserved Kannada One News