ರಾಜ್ಯದಲ್ಲಿ ಪತ್ತೆಯಾಗಿದ್ದು ಮಂಕಿಪಾಕ್ಸ್ ಅಲ್ಲ, ಚಿಕನ್‌ಪಾಕ್ಸ್: ಸಚಿವ ಸುಧಾಕರ್

ರಾಜ್ಯದಲ್ಲಿ ಪತ್ತೆಯಾಗಿದ್ದು ಮಂಕಿಪಾಕ್ಸ್ ಅಲ್ಲ, ಚಿಕನ್‌ಪಾಕ್ಸ್: ಸಚಿವ ಸುಧಾಕರ್

Updated : 31.07.2022

ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದು ಮಂಕಿಪಾಕ್ಸ್ ಅಲ್ಲ, ಚಿಕನ್‌ಪಾಕ್ಸ್ (ಸೀತಾಳೆ ಸಿಡುಬು) ಎಂಬುದು ದೃಢಪಟ್ಟಿದೆ.

ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ' ಎಂದು ಸಚಿವರು ತಿಳಿಸಿದ್ದಾರೆ.

'ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡುಬಂದಿರು ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ' ಎಂದು ಸಚಿವರು ಮಾಹಿತಿ ನೀಡಿದ್ದಾರೆ.

© Copyright 2022, All Rights Reserved Kannada One News