ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಪುರುಷ, ಮಹಿಳಾ ಕ್ರಿಕೆಟಿಗರಿಗೆ ಸಮಾನ ಪಂದ್ಯ ವೇತನ: ಬಿಸಿಸಿಐ ಘೋಷಣೆ

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

Updated : 30.10.2022

ಬ್ರಿಸ್ಬೇನ್: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಬಾಂಗ್ಲಾದೇಶ 3 ರನ್ ಗಳ ರೋಚಕ ಜಯ ದಾಖಲಿಸಿದೆ.

ಟಿ20 ವಿಶ್ವಕಪ್ ಟೂರ್ನಿ ಇಂದು ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದ್ದು, ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಿನ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹರಸಾಹಸ ಪಟ್ಟವು. ಅಂತಿಮವಾಗಿ 3ರನ್ ಗಳ ಅಂತರಗಲ್ಲಿ ಬಾಂಗ್ಲಾದೇಶ ತಂಡ ಜಯಗಳಿಸಿದೆ.

ಅಂತಿಮ ಓವರ್‌ನಲ್ಲಿ ಎರಡು ತಂಡಗಳಿಗೂ ಗೆಲ್ಲುವ ಅದ್ಭುತ ಅವಕಾಶವಿದ್ದರೂ ಜಿಂಬಾಬ್ವೆ ತಂಡ ಎಡವಿದ ಕಾರಣ ಕೇವಲ 3 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ನಡೆಸಿ ನಿಗದಿತ 20 ಓವರ್‌ಗಳಲ್ಲಿ 150 ರನ್‌ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲಿಯೇ ಆಘಾತಕ್ಕೆ ಒಳಗಾಗಿ ಸೋಲಿನ ದವಡೆಗೆ ಸಿಲುಕಿದ್ದರು ಕೂಡ ಸೀನ್ ವಿಲಿಯಮ್ಸ್ ಅದ್ಭುತ ಹೋರಾಟದ ಫಲವಾಗಿ ಚೇತರಿಸಿಕೊಂಡು ಗೆಲುವಿನ ಸನಿಹಕ್ಕೆ ಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಬಾಂಗ್ಲಾ ಮೇಲುಗೈ ಸಾಧಿಸಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ತಂಡ ಉತ್ತಮ ಆರಂಭವನ್ನು ಪಡೆಯಲು ವಿಫಲವಾಯಿತು. ನಜ್ಮುಲ್‌ ಹೊಸೈನ್‌ ಶಾಂಟೊ (71) ಅರ್ಧಶತಕ ಗಳಿಸಿ ತಮ್ಮ ತಂಡಕ್ಕೆ ನೆರವಾದರು.  ಇತರ ಆಟಗಾರರಿಂದ ಹೇಳಿಕೊಳ್ಳುವಂತಾ ಪ್ರದರ್ಶನ ಬಾರದಿದ್ದರೂ ಕೆಲ ಸಾಧಾರಣ ಜೊತೆಯಾಟಗಳಲ್ಲಿ ಭಾಗಿಯಾಗಿ ತಂಡದ ಮೊತ್ತ 150ರ ಗಡಿ ತಲುಪಲು ನಜ್ಮುಲ್ ಹೊಸೈನ್ ಕಾರಣವಾದರು. ಅಂತಿಮವಾಗಿ 20 ಓವರ್ ಗಳಲ್ಲಿ ಬಾಂಗ್ಲಾದೇಶ ತಂಡ 7 ವಿಕೆಟ್ ನಷ್ಟಕ್ಕೆ 150ರನ್ ಕಲೆಹಾಕಿ ಜಿಂಬಾಬ್ವೆಗೆ ಗೆಲ್ಲಲು 151ರನ್ ಗಳ ಗುರಿ ನೀಡಿತು.

ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 147 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸೀನ್‌ ವಿಲಿಯಮ್ಸ್‌ ಹೋರಾಟ ನಡೆಸಿದರಾದರೂ, 8 ಎಸೆತಗಳಲ್ಲಿ 19 ರನ್ ಬೇಕಿದ್ದಾಗ ವಿಕೆಟ್‌ ಕೈಚೆಲ್ಲಿ ನಿರಾಸೆ ಮೂಡಿಸಿದರು. 42 ಎಸೆತಗಳಲ್ಲಿ 64 ರನ್‌ ಗಳಿಸಿದ್ದ ಅವರು, 19ನೇ ಓವರ್‌ನ 4ನೇ ಎಸೆತದಲ್ಲಿ ರನೌಟ್‌ ಆದರು. ಇದರೊಂದಿಗೆ ಜಿಂಬಾಬ್ವೆ ಜಯದ ಕನಸು ಕಮರಿತು. ಆ ಮೂಲಕ ಜಿಂಬಾಬ್ವೆ ಕೇವಲ 3 ರನ್ ಗಳ ಅಂತರದಲ್ಲಿ ಶರಣಾಯಿತು. ಈ ಜಯದೊಂದಿಗೆ ಬಾಂಗ್ಲಾ ತಂಡ 'ಬಿ' ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿತು.

© Copyright 2022, All Rights Reserved Kannada One News