ದೇವಸ್ಥಾನ, ಟ್ರಸ್ಟ್ ಮತ್ತು ಮಠಗಳಿಗೆ 400 ಕೋಟಿ ಘೋಷಿಸಿದ ಸಿಎಂ ಬೊಮ್ಮಾಯಿ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ದೇವಸ್ಥಾನ, ಟ್ರಸ್ಟ್ ಮತ್ತು ಮಠಗಳಿಗೆ 400 ಕೋಟಿ ಘೋಷಿಸಿದ ಸಿಎಂ ಬೊಮ್ಮಾಯಿ

Updated : 22.09.2022

ಬೆಂಗಳೂರು: ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಪಾವತಿಸುವ ‘ರೈತ ವಿದ್ಯಾನಿಧಿ’ ಯೋಜನೆಗೆ ₹810 ಕೋಟಿ ನೀಡಿದ್ದರೆ, ದೇವಸ್ಥಾನ, ಟ್ರಸ್ಟ್‌ ಮತ್ತು ಮಠಗಳಿಗೆ ₹400 ಕೋಟಿಯನ್ನು ಹೆಚ್ಚುವರಿಯಾಗಿ ನೀಡುವ ₹14,762 ಕೋಟಿ ಮೊತ್ತದ ಪೂರಕ ಅಂದಾಜನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.

ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿರುವ ಮೊತ್ತಕ್ಕಿಂತ ಹೆಚ್ಚಿನ ಅನುದಾನವನ್ನು ನೀಡಲು ಈ ಸಾಲಿನ ಮೊದಲ ಪೂರಕ ಅಂದಾಜನ್ನು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ್ದಾರೆ. ಅಲ್ಲದೆ, ಟ್ಯಾಕ್ಸಿ ಚಾಲಕರ ಮಕ್ಕಳ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು ವಿದ್ಯಾನಿಧಿ ಯೋಜನೆ ವಿಸ್ತರಿಸಲು ಮತ್ತು ಆರೋಗ್ಯ ಸೌಲಭ್ಯಕ್ಕಾಗಿ ವಿಶೇಷ ಯೋಜನೆ ರೂಪಿಸಲು ₹10 ಕೋಟಿ ಒದಗಿಸಲಾಗಿದೆ.

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ಅಭಿವೃದ್ಧಿಗೆ ಹಾಗೂ ಹಾನಿಗೊಳಗಾದ ಮನೆಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಹೊರತುಪಡಿಸಿ ಹೆಚ್ಚುವರಿ ಪಾಲಿನ ಅನುದಾನವೂ ಸೇರಿ ಒಟ್ಟು ₹837.37 ಕೋಟಿ ಸೇರಿಸಲಾಗಿದೆ.ಲಿಂಗಾಯತಿಗೆ ₹100 ಕೋಟಿ, ಒಕ್ಕಲಿಗರಿಗೆ ₹105 ಕೋಟಿಲಿಂಗಾಯಿತ ನಿಗಮಕ್ಕಿಂತ ಒಕ್ಕಲಿಗ ನಿಗಮಕ್ಕೇ ಹೆಚ್ಚು ಅನುದಾನ ನೀಡಲಾಗಿದೆ.

ಒಕ್ಕಲಿಗ ನಿಗಮಕ್ಕೆ ₹105 ಕೋಟಿ ನೀಡಿದ್ದರೆ, ಲಿಂಗಾಯಿತ ನಿಗಮಕ್ಕೆ ₹100 ಕೋಟಿ ನೀಡಲಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ₹50 ಕೋಟಿ, ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ₹7 ಕೋಟಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ₹15 ಕೋಟಿ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ₹14 ಕೋಟಿ, ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ₹17 ಕೋಟಿ, ಮರಾಠ ಅಭಿವೃದ್ಧಿ ನಿಗಮಕ್ಕೆ ₹60 ಕೋಟಿ, ಮಡಿವಾಳ ಮಾಚಿದೇವ ನಿಗಮಕ್ಕೆ ₹9 ಕೋಟಿ, ಬಾಬು ಜಗಜೀವನರಾಮ್‌ ಅಭಿವೃದ್ಧಿ ನಿಗಮಕ್ಕೆ ₹25 ಕೋಟಿ ನೀಡಲಾಗಿದೆ.

© Copyright 2022, All Rights Reserved Kannada One News