ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

Related Articles

ಮಲ್ಲಿಕಾರ್ಜುನ ಖರ್ಗೆಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

‘ಪೇ ಟಿಎಂ ಅಲ್ಲ ಪೇ ಸಿಎಂ’: ಇದು ಬಿಜೆಪಿ ಭ್ರಷ್ಟಾಚಾರದ ಜಾಹೀರಾತು

ಮೂಡಿಗೆರೆ ಮಾಯಾವಿ ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿ ಕುರಿತು ಪಿ. ಲಂಕೇಶರ ಮಾತು

‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

ಗೌರಿಯನ್ನು ಕೊಂದವರು ಜೈಲಿನಲ್ಲಿದ್ದಾರೆ, ಕೊಲ್ಲಿಸಿದವರು ಅಧಿಕಾರದಲ್ಲಿದ್ದಾರೆ: ನಟ ಪ್ರಕಾಶ್ ರಾಜ್

ನಾ ಕಂಡ ಹಾಗೆ 'ಗೌರಿ' ಅಮ್ಮ: ವಿಕಾಸ್ ಆರ್ ಮೌರ್ಯ ಅವರ ಲೇಖನ

ಗೌರಿಯ ಅಕ್ಷರಗಳು ಮಾತು ಚಟುವಟಿಕೆ ಎಲ್ಲವೂ ನಿರ್ಭಯ ಭಾರತ ನಿರ್ಮಾಣದ ಗುರಿ ಹೊಂದಿತ್ತು: ಕೆ. ನೀಲಾ ಅವರ ಲೇಖನ

ನನ್ನಕ್ಕ ಗೌರಿ ಲಂಕೇಶ್, ನಾನು ಲಂಕೇಶ್! -ಅಪ್ಪಗೆರೆ ಲಂಕೇಶ್ ಅವರ ಲೇಖನ

ಗೌರಿ ಲಂಕೇಶ್ ವ್ಯಕ್ತಿತ್ವದ ಭಿನ್ನ ಆಯಾಮಗಳು: ಹುಲಿಕುಂಟೆ ಮೂರ್ತಿ ಅವರ ಲೇಖನ

ಜನಸೇವಕ ಟಿ.ಆರ್.ಶಾಮಣ್ಣ ನೆನಪು: ಹರೀಶ್ ಕಳಸೆ ಅವರ ಲೇಖನ

ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

Updated : 17.09.2022

ತುಮಕೂರು: ಪತಿಯು ಆನಾರೋಗ್ಯದಿಂದ ಮೃತಪಟ್ಟ ನಂತರ, ನಮ್ಮನ್ನು ದಲಿತರೆಂದು ಮನೆಗೆ ಸೇರಿಸುತ್ತಿಲ್ಲ ಎಂದು ಅಂತರ್‌ಜಾತಿಯ ವಿವಾಹವಾಗಿದ್ದಮಂಜುಳಾ ಎಂಬ ಮಹಿಳೆ, ಪುಟ್ಟ ಮಗುವಿನೊಂದಿಗೆ ಧರಣಿ ನಡೆಸುತ್ತಿರುವ ಘಟನೆ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಪುರಂ ಬಡಾವಣೆಯ ಭೋವಿ ಜನಾಂಗಕ್ಕೆ ಸೇರಿದ ಮಂಜುಳಾ ಮತ್ತು ತುಮಕೂರಿನ ವಿದ್ಯಾನಗರದಲ್ಲಿ ವಾಸವಾಗಿರುವ ಒಕ್ಕಲಿಗ ಜನಾಂಗಕ್ಕೆ ಸೇರಿದ ಜಿತೇಂದ್ರ ಅವರು ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇವರಿಗೆ ಒಂದು ಹೆಣ್ಣು ಮಗುವಿದೆ. ಗಂಡ, ಹೆಂಡತಿ ಇಬ್ಬರು ಬೆಂಗಳೂರಿನ ಮಹಾಲಕ್ಷ್ಮೀಪುರಂನಲ್ಲಿಯೇ ಬಾಡಿಗೆ ಮನೆ ಪಡೆದು ವಾಸ ಮಾಡುತ್ತಿದ್ದರು. ಆಗಾಗ್ಗೆ ತುಮಕೂರಿಗೂ ಬಂದು ಹೋಗುತ್ತಿದ್ದರು ಎನ್ನಲಾಗಿದೆ.

ಧರಣಿಯಲ್ಲಿ ಮಂಜುಳಾ ಮಾತನಾಡಿ, ಇತ್ತೀಚೆಗೆ ಜಿತೇಂದ್ರ ಅವರು ಜಾಂಡಿಸ್ ರೋಗಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಅತ್ತೆ ಮತ್ತು ಅವರ ಐದು ಮಂದಿ ಹೆಣ್ಣು ಮಕ್ಕಳು ಮತ್ತು ಅವರ ಪತಿಯಂದಿರು ಮಗನ ಸಾವಿಗೆ ಸೊಸೆ ನೀಡಿದ ಸ್ಲೋಪಾಯಿಸ್ಸನ್ ಕಾರಣ ಎಂದು ಪೊಲೀಸರಿಗೆ ದೂರು ನೀಡಿ, ಐಪಿಸಿ ಕಲಂ 302ರ ಅನ್ವಯ ಕೊಲೆ ಕೇಸು ದಾಖಲಿಸಿದ್ದಾರೆ ಎಂದು ಮಂಜುಳಾ ದೂರಿದರು.

ದಲಿತ ಸಮುದಾಯಕ್ಕೆ ಸೇರಿದ ಸೊಸೆಗೆ ಆಸ್ತಿಯಲ್ಲಿ ಪಾಲು ನೀಡಬೇಕಾಗುತ್ತದೆ ಎಂಬ ಒಂದೇ ಒಂದು ಕಾರಣದಿಂದ ಮೃತ ಜಿತೇಂದ್ರದ ತಾಯಿ ಮತ್ತು ಸಹೋದರಿಯರು, ನನ್ನ ಗಂಡನ ಹೆಸರಿನಲ್ಲಿರುವ ತುಮಕೂರು ವಿದ್ಯಾನಗರದ ಮನೆಗೆ ಅಕ್ರಮವಾಗಿ ಸೇರಿಕೊಂಡಿದ್ದಾರೆ. ನಾನು ಮನೆಯೊಳಗೆ ಹೋಗಲು ಬಿಡುತ್ತಿಲ್ಲ ಎಂದು ಆರೋಪಿಸಿದರು.

© Copyright 2022, All Rights Reserved Kannada One News