ಅಧಿಕಾರಿಗಳು ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎನ್ನಬೇಕು: ಸಚಿವರ ಆದೇಶ

Related Articles

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಎರಡು ರೀತಿಯ ಸಾಹಿತಿಗಳು ಇದ್ದಾರೆ: ಸಿಎಂ ಬೊಮ್ಮಾಯಿ‌

ದಸರಾ ಕ್ರೀಡಾಪಟುಗಳಿಗೆ ವಸತಿ ನೀಡಲು ಯೋಗ್ಯತೆ ಇಲ್ಲವೇ? : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

ಪಿಎಫ್ಐ ಸಿದ್ದರಾಮಯ್ಯರ ಪಾಪದ ಕೂಸು: ಯಡಿಯೂರಪ್ಪ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ: ನಾಮಪತ್ರ ಸ್ವೀಕರಿಸಿದ ದಿಗ್ವಿಜಯ್ ಸಿಂಗ್

‘ರೂಟ್ ಮಾರ್ಚ್’ ಗೆ ಆರೆಸ್ಸೆಸ್ ಮನವಿ : ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ : ಎಸ್ ಡಿಪಿಐ ಕಚೇರಿ, ಮುಖಂಡರ ಮನೆಗಳ ಮೇಲೆ ಪೊಲೀಸ್ ದಾಳಿ

ಅಧಿಕಾರಿಗಳು ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎನ್ನಬೇಕು: ಸಚಿವರ ಆದೇಶ

Updated : 15.08.2022

ಮುಂಬೈ: ಮಹಾರಾಷ್ಟ್ರದ ಸರಕಾರಿ ಅಧಿಕಾರಿಗಳು ಈಗ ತಮ್ಮ ಕಚೇರಿಗಳಲ್ಲಿ ಫೋನ್ ಕರೆಗಳನ್ನು ಸ್ವೀಕರಿಸುವಾಗ "ಹಲೋ" ಬದಲಿಗೆ "ವಂದೇ ಮಾತರಂ" ಎಂದು ಹೇಳಬೇಕಾಗುತ್ತದೆ ಎಂದು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸುಧೀರ್ ಮುಂಗಂಟಿವಾರ್ ರವಿವಾರ ಆದೇಶಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆಗಸ್ಟ್ 18 ರೊಳಗೆ ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ರವಿವಾರ ಸಚಿವರಿಗೆ ಖಾತೆಗಳನ್ನು ಘೋಷಿಸಿದ ತಕ್ಷಣ ಸಚಿವ ಮುಂಗಂಟಿವಾರ್ ಹೇಳಿದರು.

"ಹಲೋ ಒಂದು ಇಂಗ್ಲಿಷ್ ಪದ ಹಾಗೂ ಅದನ್ನು ಬಿಟ್ಟುಕೊಡುವುದು ಮುಖ್ಯವಾಗಿದೆ. ವಂದೇ ಮಾತರಂ ಕೇವಲ ಪದವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಅನುಭವದ ಭಾವನೆ...ನಾವು ಸ್ವಾತಂತ್ರ್ಯದ 76ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ನಾವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಆದ್ದರಿಂದ ಅಧಿಕಾರಿಗಳು ಹಲೋ ಬದಲು ಫೋನ್ ಮೂಲಕ 'ವಂದೇ ಮಾತರಂ' ಹೇಳಬೇಕೆಂದು ನಾನು ಬಯಸುತ್ತೇನೆ ಎಂದು ಮುಂಗಂಟಿವಾರ್ ತಿಳಿಸಿದ್ದಾರೆ.

© Copyright 2022, All Rights Reserved Kannada One News