ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

Updated : 20.09.2022

ಹೊಸದಿಲ್ಲಿ:  ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ ಆರ್ ಪೂವಮ್ಮ ಅವರು ಉದ್ದೀಪನ ಮದ್ದು ಸೇವನೆ ಹಿನ್ನೆಲೆ 2 ವರ್ಷ ನಿಷೇಧಕ್ಕೆ ಒಳಗಾಗಿದ್ದಾರೆ.

ಕಳೆದ ವರ್ಷ ಫೆ.18ರಂದು ಪಟಿಯಾಲದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ ಮೂರು ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

© Copyright 2022, All Rights Reserved Kannada One News