ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಠಿಸಿದ ನೀರಜ್ ಚೋಪ್ರಾ

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಠಿಸಿದ ನೀರಜ್ ಚೋಪ್ರಾ

Updated : 24.07.2022

ಒರೆಗಾನ್: ಭಾರತದ ಜಾವೆಲಿನ್ ಥ್ರೋ ಸೂಪರ್ ಸ್ಟಾರ್ ನೀರಜ್ ಚೋಪ್ರಾ ವಿಶ್ವ ಅಥ್ವೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಮೊದಲ ಯತ್ನದಲ್ಲಿ ಫೌಲ್ ಆದ ಚೋಪ್ರಾ ಅವರಿಂದ ಎರಡನೇ ಹಾಗೂ ಮೂರನೇ ಯತ್ನದಲ್ಲಿ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಆದರೆ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಎರಡನೇ ಸ್ಥಾನಕ್ಕೆ ಜಿಗಿದರು. ಐದನೇ ಯತ್ನದಲ್ಲಿ ಮತ್ತೆ ಫೌಲ್ ಆದರೂ ಎರಡನೇ ಸ್ಥಾನ ಕಾಪಾಡಿಕೊಂಡರು. ಚೋಪ್ರಾ ತಮ್ಮ ಎರಡನೇ ಯತ್ನದಲ್ಲಿ 82.39 ಮೀಟರ್ ಹಾಗೂ ಮೂರನೇ ಯತ್ನದಲ್ಲಿ 86.37 ಮೀಟರ್ ಎಸೆದಿದ್ದರು.

12 ಮಂದಿಯ ಪೈಕಿ ಮೊದಲನೆಯವಾಗಿ ಜಾವೆಲಿನ್ ಎಸೆದ 24 ವರ್ಷ ವಯಸ್ಸಿನ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮೊದಲ ಯತ್ನದಲ್ಲಿ ಫೌಲ್ ಆದರು. ಚಿನ್ನದ ಪದಕದ ಮೇಲೆ ಕಣ್ಣಿಟ್ಟಿರುವ ಹಾಲಿ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್ ಗ್ರೆನೇಡಾ ಮೊದಲ ಯತ್ನದಲ್ಲೇ 90.21 ಮೀಟ‌ರ್‌ ಗಳೊಂದಿಗೆ ಅಗ್ರಸ್ಥಾನ ಪಡೆದರು.

ನಿರಂತರವಾಗಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದ ಪೀಟರ್ಸ್ ಕೊನೆಯ ಯತ್ನದಲ್ಲಿ 90.54 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ತಮ್ಮ ಸ್ಥಾನ ಭದ್ರಪಡಿಸಿಕೊಂಡರು. ನೀರಜ್ ಚೋಪ್ರಾ ತಮ್ಮ ಕೊನೆಯ ಯತ್ನದಲ್ಲಿ 'ಲಕ್ಷ್ಮಣರೇಖೆ' ದಾಟಿ ಫೌಲ್ ಆದ ಕಾರಣದಿಂದ ನೆಲಕ್ಕೆ ಕೈ ಬಡಿದು ಹತಾಶೆ ವ್ಯಕ್ತಪಡಿಸಿದರು. ನೀರಜ್ ಚೋಪ್ರಾ ಅವರ ಜೀವಮಾನದ ಅತ್ಯುತ್ತಮ ಸಾಧನೆ 89.94 ಮೀಟರ್ ಆಗಿದ್ದು, ಸ್ಟಾಕ್‍ಹೋಂ ಡೈಮಂಡ್ ಲೀಗ್‍ನಲ್ಲಿ ಈ ದಾಖಲೆ ಸ್ಥಾಪಿಸಿದ್ದರು.

ಅಂಜು ಬಾಬಿ ಜಾರ್ಜ್ ಬಳಿಕ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಎಂಬ ದಾಖಲೆಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. ಭಾರತದ ರೋಹಿತ್ ಯಾದವ್ 78.72 ಮೀಟರ್‍ನೊಂದಿಗೆ 10ನೆಯವರಾಗಿ ಸ್ಪರ್ಧೆ ಮುಗಿಸಿದರು. 88.09 ಮೀಟರ್ ಎಸೆದ ಜಾಕೋಬ್ ವಡ್ಲೆಚ್ ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಜೂಲಿಯನ್ ವೆಬೆರ್ 86.86 ಮೀಟರ್‍ನೊಂದಿಗೆ ನಾಲ್ಕನೇ ಸ್ಥಾನ ಪಡೆದರು.

© Copyright 2022, All Rights Reserved Kannada One News