Voter ID Scam; ಆಪರೇಷನ್ ಕಮಲದ ಮುಂದುವರಿದ ಭಾಗ: ಸಿದ್ದರಾಮಯ್ಯ

Voter ID Scam; ಆಪರೇಷನ್ ಕಮಲದ ಮುಂದುವರಿದ ಭಾಗ: ಸಿದ್ದರಾಮಯ್ಯ

Updated : 18.11.2022

ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿ, ಮತದಾರರ ಮಾಹಿತಿ ಕಳವಿಗೆ ಬೆಂಗಳೂರು ಬಿಬಿಎಂಪಿ ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣರಾಗಿದ್ದಾರೆ’ ಎಂದು ಆರೋಪಿಸಿರುವ  ಕಾಂಗ್ರೆಸ್, ‘ಮುಖ್ಯಮಂತ್ರಿ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದ್ದಲ್ಲದೆ ಇದು ಮತದಾರರ ಹಕ್ಕಿನ ದರೋಡೆಯಾಗಿದೆ ಎಂದು ಆರೋಪಿಸಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ಚುನಾವಣಾ ಆಯೋಗ ಈ ಹೀನಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

© Copyright 2022, All Rights Reserved Kannada One News